ವೀರನಾರಾಯಣ ದೇವಸ್ಥಾನ
ಚತುರಶಿಲ್ಪಿ ಜಕಣಾಚಾರಿ ಕೆತ್ತಿದನೆಂದು ಹೇಳಲಾಗುವ ಈ ದೇವಸ್ಥಾನದ ಗೋಪುರ ನೋಡುಗರ ಕಣ್ಮನ ಸೆಳೆಯುತ್ತದೆ. ಗದುಗಿನ ಮಹಾಭಾರತ ಅಥವಾ ಕರ್ಣಾಟ ಭಾರತ ಕಥಾಮಂಜರಿ ರಚಿಸಿದ ಕುಮಾರವ್ಯಾಸ ಇದೇ ದೇವಸ್ಥಾನದಲ್ಲಿ ಕುಳಿತು ಮಹಾಭಾರತವನ್ನು ರಚಿಸಿದನೆಂದು ಹೇಳಲಾಗುತ್ತದೆ. ಆತ ದೇವಸ್ಥಾನದ ಯಾವ ಕಂಬದ ಕೆಳಗೆ ಕುಳಿತು ಪ್ರತಿದಿನ ಮಹಾಭಾರತ ಬರೆಯುತ್ತಿದ್ದನೋ ಇವತ್ತಿಗೂ ಅದು ಕುಮಾರವ್ಯಾಸ ಕಂಬವೆಂದೇ ಪ್ರಸಿದ್ದಿಯಾಗಿದೆ.